ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ.

Promotion

ಮೈಸೂರು,ಜುಲೈ,15,2022(www.justkannada.in):  ಇಂದು ಆಷಾಢಮಾಸ 3ನೇ ಶುಕ್ರವಾರ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ವಿಶೇಷ ಪೂಜೆ  ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ನಾಡಿನ ಜನತೆಗೆ ಒಳಿತಾಗುವಂತೆ ಪ್ರಾರ್ಥಿಸಿದ್ದೇನೆ.ಉತ್ತಮ ಮಳೆಯಾಗಿದ್ದು ನಾಡು ಸಮೃದ್ಧಿಗೆ ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು.

ಶಾಲಾ ಮಕ್ಕಳಿಗೆ ಮೊಟ್ಟೆ ತೆಗೆದು ಹಾಕುವಂತೆ NEP ಸಮಿತಿ ಶಿಫಾರಸ್ಸು ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ, ರಾಜ್ಯ ಸರ್ಕಾರ ಮಕ್ಕಳಿಗೆ ಮೂಲಭೂತ ಸೌಲಭ್ಯಗಳನ್ನ ಕೊಡುತ್ತಿಲ್ಲ. ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ಕೊಡಬೇಕು. ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಮೊಟ್ಟೆ ಎಲ್ಲವನ್ನೂ ಕೊಡಬೇಕು ಎಂದು ಹೇಳಿದರು.

ಸಿದ್ಧರಾಮೋತ್ಸವ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ರೇವಣ್ಣ, ಸಿದ್ದರಾಮೋತ್ಸವಕ್ಕೂ ನಮಗೂ ಸಂಬಂಧವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನವರು ನಮಗೂ ಅದಕ್ಕೂ ಸಂಭಂದವಿಲ್ಲ ಎಂದರು.

Key words: Former minister-HD Revanna-visited-Chamundi hill – special pooja.