2000-01 ರಿಂದ 2020-21ರವರೆಗಿನ ಶಿಕ್ಷಕರ ನೇಮಕಾತಿ ತನಿಖೆಗೆ ರಾಜ್ಯ ಸರಕಾರದಿಂದ ಗ್ರೀನ್ ಸಿಗ್ನಲ್?

Promotion

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): 2000-01 ರಿಂದ 2020-21ರವರೆಗೆ ನಡೆಸಲಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಎಲ್ಲಾ ನೇಮಕಾತಿ ಕುರಿತು ತನಿಖೆ ಆರಂಭವಾಗುವ ಸಾಧ್ಯತೆ ಇದೆ.

ಹೌದು. ರಾಜ್ಯ ಸರ್ಕಾರಿಂದ 2000-01 ರಿಂದ 2020-21ರವರೆಗೆ ನಡೆಸಲಾದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಎಲ್ಲಾ ನೇಮಕಾತಿಗಳನ್ನು ತನಿಖೆಗೆ ಒಳಪಡಿಸಬೇಕೆಂಬ ಮನವಿಗೆ ಒಪ್ಪಿಗೆ ಸಿಕ್ಕಿದೆ ಎನ್ನಲಾಗಿದೆ. ಆ ಬಗ್ಗೆ ತನಿಖೆಗೆ ಆದೇಶಿಸುತ್ತಾ ಎನ್ನುವ ಕುತೂಹಲ ಮೂಡಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಲಂಚ ಮುಕ್ತ ಕರ್ನಾಯಕ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನಯ್ಯ ಬಿಎಸ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ಎಲ್ಲಾ ನೇಮಕಾತಿಗಳನ್ನು ತನಿಖೆಗೆ ಒಳಪಡಿಸುವಂತೆ ಕೋರಿ, ಮನವಿ ಸಲ್ಲಿಸಿದ್ದಾರೆ.