ಅಗತ್ಯ ವಸ್ತುಗಳ ಮೇಲಿನ ಜಿಎಸ್ ಟಿ ರದ್ಧುಗೊಳಿಸುವಂತೆ ಆಗ್ರಹ: ದೆಹಲಿಯಲ್ಲಿ ‘ಕೈ’ ಸಂಸದರಿಂದ ಪ್ರತಿಭಟನೆ.

Promotion

ನವದೆಹಲಿ,ಜುಲೈ,19,2022(www.justkannada.in):  ಅಗತ್ಯ ವಸ್ತುಗಳ ಮೇಲೆ ವಿಧಿಸಿರುವ ಜಿಎಸ್ ಟಿ ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿ ಸಂಸತ್ ಆವರಣದಲ್ಲಿ  ಗಾಂಧಿ ಪ್ರತಿಮ ಎದುರು ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದು, ಅಗತ್ಯ ವಸ್ತುಗಳ ಜಿಎಸ್ ಟಿ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ಶೇಕಡ 5 ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿದ್ದು ಇದರ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: GST -product- Protest –congress-MPs