ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ.

Promotion

ಹಾವೇರಿ,ಫೆಬ್ರವರಿ,23,2023(www.justkannada.in): ಸಾಲಬಾಧೆ ತಾಳಲಾರದೇ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.  ಒಂದೇ ಕುಟುಂಬದವರಾದ ತಂದೆ ಹನುಮಂತಗೌಡ ಪಾಟೀಲ (54), ತಾಯಿ ಲಲಿತಾ ಪಾಟೀಲ (50), ಮತ್ತು ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾದವರು.

ಮಗಳ ಮದುವೆಗಾಗಿ ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರುಪಾಯಿ ಸಾಲ ಮಾಡಿದ್ದರು.  ಸಾಲಬಾಧೆಯನ್ನು ತಾಳಲಾರದೆ ದಂಪತಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು  ಸಹ ತಾನೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಸವಣೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Key words: haveri-three – same family –committed- suicide.