Promotion
ಬೆಂಗಳೂರು,ಆ,6,2020(www.justkannada.in): ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟ ಜೋರಾಗಿದ್ದು ಈ ನಡುವೆ ವರುಣನ ಅಬ್ಬರವೂ ಇದೀಗ ಹೆಚ್ಚಾಗಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆಗಸ್ಟ್ 8 ಹಾಗೂ 9 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರಿ ಮಳೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆನೀಡಿದೆ. ಇನ್ನು ಕಾವೇರಿ, ಕಪಿಲೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುಂದಿನ 5 ದಿನಗಳಲ್ಲಿ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಭಾಗಮಂಡಲ ಸಂಪೂರ್ಣ ಜಲಾವೃತವಾಗಿದ್ದು, ತಲಕಾವೇರಿ, ಕೋರಂಗಾಲ, ಚೇರಂಗಾಲ ಸೇರಿದಂತೆ ಹಲವು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಭಗಂಡೇಶ್ವರ ದೇವಲಯಕ್ಕೂ ನೀರು ನುಗ್ಗಿದ್ದು, ತುರ್ತು ಸೇವೆಗಾಗಿ ಬೋಟ್ ನಿಯೋಜನೆ ಮಾಡಲಾಗಿದೆ. ಮಳೆ ಹಿನ್ನೆಲೆ ಕೊಡಗು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್, ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
Key words: Heavy –rain-kodagu-red alert