ಡಿ.23ರಿಂದ ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ ಎನ್’ಇಪಿ ಜಾರಿ: ಸಚಿವ ಬಿ.ಸಿ.ನಾಗೇಶ್

kannada t-shirts

ಬೆಂಗಳೂರು, ನವೆಂಬರ್ 20, 2022 (www.justkannada.in): ರಾಜ್ಯದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ ಎರಡೆರಡು ಪುಸ್ತಕ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ರಾಜ್ಯದ ಶಾಲೆಗಳಲ್ಲಿ ಚಿಲಿಪಿಲಿ, ನಲಿಕಲಿಯ ಮೂಲಕ ಎನ್ ಇಪಿಯ ಆಶಯಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

website developers in mysore