ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ: ರಾಜ್ಯದ ಎಲ್ಲಾ ಶಾಲಾ ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ.

Promotion

ಬೆಂಗಳೂರು,ಜುಲೈ,19,2022(www.justkannada.in):  ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ  ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ರಾಷ್ಟ್ರಧ್ವಜ ಹಾರಾಟ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ, ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ 6 ದಿನ ರಾಷ್ಟ್ರ ಧ್ವಜ ಹಾರಿಸಬೇಕು.  ಶಾಲಾ ಕಾಲೇಜು, ಮದರಸಾಗಳಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ಗೀತಗಾಯನ, ಪ್ರಭಂದ, ಕ್ವಿಜ್, ಸ್ವಾತಂತ್ರ್ಯ ಹೋರಾಟಗಾರ ಚಿತ್ರ ಬಿಡಿಸುವ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಹೇಳಿದೆ.covid-dead-body-cancels-license-order-state-government

ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸುವುದು ಕಡ್ಡಾಯವಾಗಿದೆ. ಹೀಗಾಗಿ ಯಾವುದೇ ಕುಂಟು ನೆಪ ಹೇಳದೆ ಎಲ್ಲಾ ಮದರಸಾಗಳಲ್ಲಿ ರಾಷ್ಟ್ರ ಧ್ವಜ ಕಡ್ಡಾಯವಾಗಿ ಹಾರಿಸಬೇಕು. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸುವಂತೆ ಸೂಚನೆ ತಿಳಿಸಿದೆ.

Key words: Independence Day -mandatory – fly – national flag -all – schools-colleges – madrasa