ತವರಿಗೆ ಬಂದ ಭಾರತೀಯರು: ಆಫ್ಘಾನಿಸ್ತಾನದಿಂದ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ

Promotion

ಬೆಂಗಳೂರು, ಆಗಸ್ಟ್ 22, 2021 (www.justkannada.in): ಆಫ್ಘಾನಿಸ್ತಾನದಿಂದ ಭಾರತೀಯ ರಕ್ಷಣಾ ಏರ್ ಲಿಫ್ಟ್ ಕಾರ್ಯಾಚರಣೆ ಭರದಿಂದ ಸಾಗಿದೆ.

87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗಿದ್ದಾರೆ. ಏರ್‌ ಇಂಡಿಯಾ 1956 ವಿಮಾನದಲ್ಲಿ 87 ಭಾರತೀಯರು ತಜಕಿಸ್ತಾನದ ಮೂಲಕ ನವದೆಹಲಿಗೆ ಮರಳುತ್ತಿದೆ.

ಈ ವಿಮಾನದಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಇದ್ದು, ಐಎಎಫ್‌ ಏರ್‌ಕ್ರಾಫ್ಟ್‌ ಮೂಲಕ ಕಾಬೂಲ್‌ನಿಂದ ಪ್ರಯಾಣಿಕರನ್ನು ಹೊರ ಒಯ್ಯಲಾಗಿದೆ.

ಈ ಸಂಬಂಧ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ಟ್ವೀಟ್‌ ಮಾಡಿದ್ದಾರೆ.

ಅಫ್ಗಾನಿಸ್ತಾನದಿಂದ ಭಾರತೀಯರನ್ನು ಕರೆತರಲಾಗುತ್ತಿದೆ. ಏರ್‌ ಇಂಡಿಯಾ 1956 ವಿಮಾನದ ಮೂಲಕ 87 ಭಾರತೀಯರು ತಜಕಿಸ್ತಾನದಿಂದ ನವದೆಹಲಿಗೆ ಹೊರಟಿದ್ದಾರೆ.