ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ : ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ

kannada t-shirts

ಬೆಂಗಳೂರು,ಫೆಬ್ರವರಿ,07,2021(www.justkannada.in) : ಉದ್ದೇಶಪೂರ್ವಕವಾಗಿ ರೈತರ ಹೋರಾಟದ ದಿಕ್ಕು ತಪ್ಪಿಸಲು ಪ್ರಯತ್ನ ನಡೆಸಲಾಗುತ್ತಿದೆ. ಆದರೆ, ಅದು ಯಶಸ್ವಿಯಾಗಿಲ್ಲ. ಜನ ಅದಕ್ಕೆ ಸ್ಪಂದನೆ ಮಾಡಿಲ್ಲ. ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ಹಿಂಸಾಚಾರ ಆಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಆಕ್ರೋಶವ್ಯಕ್ತಪಡಿಸಿದ್ದಾರೆ.jk

ಜನವರಿ 26ರಂದು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಿಂದಲೇ ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ಹಿಂಸಾಚಾರವಾಗಿದೆ. ಬಿಜೆಪಿ ಬೆಂಬಲಿತ ನಟನೋರ್ವ ಬಾವುಟವನ್ನು ಕಟ್ಟಿ ಇಷ್ಟೆಲ್ಲಾ ಸಮಸ್ಯೆಗೆ ಕಾರಣನಾಗಿದ್ದಾನೆ ಎಂದು ಕಿಡಿಕಾರಿದರು.

ದೆಹಲಿ ಗಲಭೆ ನಂತರ ಪಂಜಾಬ್ ಮೂಲದ ನೂರು ರೈತರು ಕಾಣೆಯಾಗಿದ್ದಾರೆ. ಬೇರೆ ದೇಶದಲ್ಲಿ ಅನ್ಯಾಯವಾದಾಗ ನಾವು ಧ್ವನಿ ಎತ್ತಲಿಲ್ಲವೇ?, ಶ್ರೀಲಂಕಾದಲ್ಲಿ ಅನ್ಯಾಯವಾದಾಗ ನಮ್ಮ ದೇಶದ ಸೈನಿಕರು ಹೋಗಿದ್ದರು. ಬಾಂಗ್ಲಾದೇಶದಲ್ಲಿ ಅನ್ಯಾಯವಾದಾಗ ಇಂದಿರಾಗಾಂಧಿ ಬೆಂಬಲಿಸಿ ದೇಶವನ್ನು ವಿಭಜನೆ ಮಾಡಿದರು. ನಮ್ಮ ಪ್ರಧಾನಿ ಟ್ರಂಪ್ ಪರವಾಗಿ ಪ್ರಚಾರವನ್ನು ಮಾಡಿಲ್ವಾ? ಎಂದು ವಾಗ್ದಾಳಿ ನಡೆಸಿದರು.

ನಮ್ಮ ದೇಶದ ಕೆಲವರು ಒತ್ತಡದ ಮೇಲೆ ಟ್ವೀಟ್ ಮಾಡುತ್ತಿದ್ದಾರೆ. ನೀವು ಟ್ವೀಟ್ ಮಾಡಿ ಅಂತಾ ಕೇಂದ್ರ ಸರ್ಕಾರ ಒತ್ತಡ ಹಾಕುತ್ತಿದೆ. ಸಚಿನ್ ತೆಂಡೂಲ್ಕರ್ ಕಟೌಟ್ ಗೆ ಮಸಿ ಬಳಿದು ಪ್ರತಿಭಟನೆ ಮಾಡಿದರೆ ಸಮಸ್ಯೆ ಪರಿಹಾರವಲ್ಲ. ಏನಾದರೂ ಒತ್ತಡ ಬಂದರೆ ಸ್ವಯಂ ಪ್ರೇರಿತರಾಗಿ ತಮ್ಮ ಪ್ರಶಸ್ತಿಯನ್ನು ವಾಪಸ್ ಕೊಡಬೇಕು. ರೈತರು, ದೇಶಕ್ಕಿಂತ ಯಾವುದೇ ಪ್ರಶಸ್ತಿ ದೊಡ್ಡದಲ್ಲ ಎಂದು ಟೀಕಿಸಿದ್ದಾರೆ.Intentionally,farmers,Fighting,Direction,avoid,Attempts,Satish Zarakiholi,KPCC Vice President

ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೇಶದ ತುಂಬಾ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಬೇಕು. ನೂತನ ಕೃಷಿ ಕಾಯಿದೆಗಳ ಜಾರಿಗೆ ಹಠ ಹಿಡಿಯುವುದು ಸರಿಯಲ್ಲ. ನಾವು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ. ಆದರೆ, ಹೋರಾಟದ ರೂಪುರೇಷೆ ಮಾಡಿದವರು ರೈತ ಸಂಘಟನೆಗಳು, ನಮಗೂ ಅದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

key words : Intentionally-farmers-Fighting-Direction-avoid-Attempts-Satish Zarakiholi-KPCC Vice President

website developers in mysore