ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಆರಂಭ; ಘಟಾನುಘಟಿಗಳಿಂದ ಹಕ್ಕು ಚಲಾವಣೆ

ನವದೆಹಲಿ:ಮೇ-12:(www.justkannada.in) ಲೋಕಸಭಾ ಚುನಾವಣೆಯ 6ನೇ ಹಂತದಲ್ಲಿ 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

6ನೇ ಹಂತದದಲ್ಲಿ ಉತ್ತರಪ್ರದೇಶ, ಹರಿಯಾಣ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ದೆಹಲಿ ಹಾಗೂ ಜಾರ್ಖಂಡ್​ನ 979 ಅಭ್ಯರ್ಥಿಗಳು ಮತ ಪರೀಕ್ಷೆ ಎದುರಿಸಲಿದ್ದು, 10.16 ಕೋಟಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ.

ಹಿಂದಿ ಹೃದಯ ಭಾಗ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ಮತದಾನ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿಯ ನಿರ್ಣಾಯಕ ಮತಕ್ಷೇತ್ರಗಳನ್ನು ಒಳಗೊಂಡಿದೆ.
ಪಶ್ಚಿಮ ಬಂಗಾಳದಲ್ಲಿ ಕಳೆದ 5 ಹಂತಗಳ ಮತದಾನದ ವೇಳೆ ಹಿಂಸಾಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ 6ನೇ ಹಂತದಲ್ಲಿ ಮತದಾನ ನಡೆಯುವ ಎಲ್ಲ 15,428 ಮತಗಟ್ಟೆಗಳಲ್ಲಿ ಕೇಂದ್ರ ಅರೆಸೇನಾ ಪಡೆಗಳನ್ನು ಚುನಾವಣಾ ಆಯೋಗ ನಿಯೋಜಿಸಿದೆ.

ಟೀಂ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿ ಹರಿಯಾಣದ ಗುರುಗ್ರಾಮದ ಪೈನ್ಕ್ರೆಸ್ಟ್ ಸ್ಕೂಲ್​ನಲ್ಲಿ ಹಕ್ಕು ಚಲಾವಣೆ ಮಾಡಿದರು.

ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿ ಗೌತಮ್​ ಗಂಭೀರ್​ ಅವರು ದೆಹಲಿಯ ಹಳೆಯ ರಾಜಿಂದರ್​ ನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತದಾನ ಮಾಡಿದರು.

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಈಶಾನ್ಯ ದೆಹಲಿಯ ಕಾಂಗ್ರೆಸ್​ ಅಭ್ಯರ್ಥಿ ಶೀಲಾ ದೀಕ್ಷಿತ್​ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮತಗಟ್ಟೆಯಲ್ಲಿ ಹಕ್ಕು ಚಲಾವಣೆ ಮಾಡಿದರು.

ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಆರಂಭ; ಘಟಾನುಘಟಿಗಳಿಂದ ಹಕ್ಕು ಚಲಾವಣೆ
lok sabha election,6th phase, virat kohli,goutam gambhir,voting