ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ,ಮಾರ್ಚ್,20,2022(www.justkannada.in): ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ  ಬಸವರಾಜ ಬೊಮ್ಮಾಯಿ  ಜತೆ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂಧು  ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಚಾರಕಿಹೊಳಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿವೆ, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದ್ದು ಈ ಕುರಿತು ಅವರ ಜತೆ ಚರ್ಚಿಸಿ  ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.Do not -use – word- rape-. MLA -Balachandra jarakiholi

ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ದೇಶದಲ್ಲಿಯೇ ಅತ್ಯಂತ ಕಡಿಮೆ ದರದಲ್ಲಿ ಕೆಎಂಎಫ್ ಹಾಲು ಪೂರೈಕೆ ಮಾಡುತ್ತಿದೆ. ರೈತರಿಗೆ ಅನುಕೂಲ ಕಲ್ಪಿಸಲು ದರ ಹೆಚ್ಚಳ ಅನಿವಾರ್ಯವಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

Key words: milk rate-increase-KMF President- Balachandra Jarakiholi