ನಾಳೆಯಿಂದ ಮೈಸೂರು ವಿವಿ ವಿಜ್ಞಾನ ಭವನದಲ್ಲಿ ‘ಸ್ನೇಕ್ ಪಾಯ್ಸನ್’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಮೈಸೂರು, ಡಿಸೆಂಬರ್ 12, 2019 (www.justkannada.in): ಮೈಸೂರು ವಿಶ್ವವಿದ್ಯಾಲಯದ ಜೀವರಸಾಯನಶಾಸ್ತ್ರ ಅಧ್ಯಯನ ವಿಭಾಗದಿಂದ ಡಿ.16, 17ರಂದು ‘ಚಾಲೆಂಜಸ್ ಇನ್ ಸ್ನೇಕ್ ಬೈಕ್ ಮ್ಯಾನೇಜ್’ಮೆಂಟ್’ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆಯುವ ವಿಚಾರ ಸಂಕಿರಣವನ್ನುಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಉದ್ಘಾಟಿಸಲಿದ್ದಾರೆ. ಡಾ.ಜೋಸೆಫ್ ಕೆ.ಜೋಸೆಫ್ ಪಾಲ್ಗೊಳ್ಳಲಿದ್ದಾರೆ.

17ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈವಿವಿ ರಿಜಿಸ್ಟ್ರಾರ್ ಪ್ರೊ.ಆರ್.ಶಿವಪ್ಪ ಸಮಾರೋಪ ಭಾಷಣ ಮಾಡಲಿದ್ದಾರೆ. ಸಿಂಗಾಪುರ ನ್ಯಾಷನಲ್ ಯೂನಿವರ್ಸಿಟಿ ಜೈವಿಕ ವಿಜ್ಞಾನ ವಿಭಾಗದ ಪ್ರೊ.ಆರ್ ಮಂಜುನಾಥ್ ಕಿಣಿ, ಪುಣೆಯ ನ್ಯಾಷನಲ್ ಸೆಂಟರ್ ಫಾರ್ ಸೆಲ್ ಸೈನ್ಸ್ ನಿರ್ದೇಶಕ ಡಾ.ಮನೋಜ್ ಕುಮಾರ್ ಭಟ್ ಪಾಲ್ಗೊಳ್ಳಲಿದ್ದಾರೆ.