ಜೂನ್ 7 ರ ನಂತರ ಲಾಕ್ ಡೌನ್ ಬೇಡ- ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯ.

Promotion

ಮೈಸೂರು,ಮೇ,29,2021(www.justkannada.in): ಜೂನ್ 7 ರ ನಂತರ ಲಾಕ್ ಡೌನ್ ಬೇಡ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.jk

ಮೈಸೂರಿನಲ್ಲಿ ಇಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಎರಡು ತಿಂಗಳಿಂದ ಲಾಕ್ ಡೌನ್ ಆಗಿದೆ. ದಿನ ಕೂಲಿ ಮಾಡಿ ಜೀವನ ಮಾಡುವವರ ಜೀವನ ಈಗಲೆ ಕಷ್ಟವಾಗಿದೆ. ಮತ್ತೆ ಲಾಕ್ ಡೌನ್ ಮುಂದುವರೆಸಿದರೆ ಕಷ್ಟವಾಗುತ್ತೆ.ಸಿಎಂ ಅಭಿಪ್ರಾಯ ಕೇಳಿದರೆ ಇದೇ ಅಭಿಪ್ರಾಯವನ್ನು ತಿಳಿಸುತ್ತೇನೆ. ಈಗಾಗಲೇ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದೆ. ಇದರಿಂದ ಲಾಕ್ ಡೌನ್ ಮುಂದುವರೆಸುವುದು ಬೇಡ ಎಂದರು.

ಮನೆ ಮನೆ ಸರ್ವೆ ಕಾರ್ಯದ ಬಗ್ಗೆ ರಿವಿವ್ಯೂ ಮಾಡಲಾಗಿದೆ. ಜಿಲ್ಲೆಯಲ್ಲಿ 65-70 ರಷ್ಟು ಮನೆ ಮನೆ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಎರಡ್ಮೂರು ದಿನದಲ್ಲಿ ನೂರರಷ್ಟು ಸರ್ವೆ ಕಾರ್ಯ ಮುಕ್ತಾಯವಾಗಲಿದೆ. ಯಾರಿಗೆ ಲಕ್ಷಣಗಳು ಇದೆ ಅಂತಹ ಮನೆಗಳಿಗೆ ಪದೇ ಪದೇ ಸರ್ವೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಜಿಲ್ಲೆಯಲ್ಲಿ ಔಷಧಿ ಕೊರತೆ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಕಳೆದ ಬಾರಿ ಡಿ.ಎಚ್‌.ಓ ಕೇಳಿದಾಗ ಸಮಸ್ಯೆ ಇಲ್ಲ ಎಂದು ಹೇಳಿದ್ದರು.ಇದೀಗ ಸಮಸ್ಯೆಗಳ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸುಳ್ಳು ಮಾಹಿತಿ ಕೊಡಬೇಡಿ ಅಂತ ಡಿಎಚ್ಓ ಗೆ ರೇಗಿದ್ದೇನೆ. ಸಮಸ್ಯೆ ಬಗೆಹರಿಸುವಂತೆ ಡಿಎಚ್.ಓಗೆ ಸೂಚನೆ ಕೊಟ್ಟಿದ್ದೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್  ಹೇಳಿದರು.

Key words: No lockdown- after- June 7th– Minister -ST Somashekhar -Opinion.