ನಾಳೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ

ಬೆಂಗಳೂರು, ಫೆಬ್ರವರಿ 26, 2023 (www.justkannada.in): ಪ್ರಧಾನಿ ನರೇಂದ್ರ ಮೋದಿಯವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 11-35 ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ನರೇಂದ್ರ ಮೋದಿಯವರು 11-45 ರಿಂದ 11-55 ರವರೆಗೆ ಟರ್ಮಿನಲ್ ಬಿಲ್ಡಿಂಗ್ ವೀಕ್ಷಿಸಲಿದ್ದಾರೆ.

12 ರಿಂದ 1-15 ರ ವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿರುವ ನರೇಂದ್ರ ಮೋದಿಯವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ 1-30 ಕ್ಕೆ ಶಿವಮೊಗ್ಗದಿಂದ ಹೊರಟು ಬೆಳಗಾವಿ ವಿಮಾನ ನಿಲ್ದಾಣಕ್ಕೆ 2-20ರ ವೇಳೆಗೆ ಬಂದಿಳಿಯುವ ನರೇಂದ್ರ ಮೋದಿಯವರು ಅಲ್ಲಿಂದ ಕಾರ್ಯಕ್ರಮದ ಸ್ಥಳಕ್ಕೆ ಹೆಲಿಕ್ಯಾಪ್ಟರ್ ಮೂಲಕ ತೆರಳಲಿದ್ದಾರೆ.