ಇಂದು ಮಧ್ಯಾಹ್ನ ದೆಹಲಿಯ ಕ್ರೆಮಟೋರಿಯಂನಲ್ಲಿ ಪ್ರಣಬ್ ಅಂತ್ಯಕ್ರಿಯೆ

Promotion

ನವದೆಹಲಿ, ಸೆಪ್ಟೆಂಬರ್ 01, 2020 (www.justkannada): ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ.

ದೆಹಲಿಯ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. ಪ್ರಣಬ್ ಮುಖರ್ಜಿ ಅವರ ನಿಧನದ ಹಿನ್ನೆಲೆಯಲ್ಲಿ ಒಂದು ವಾರಕಾಲ ಶೋಕಾಚರಣೆ ಘೋಷಿಸಲಾಗಿದೆ.

ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರು ಮೆದುಳು ಶಸ್ತ್ರಚಿಕಿತ್ಸೆ ನಂತರವೂ ಚೇತರಿಸಿಕೊಂಡಿರಲಿಲ್ಲ. ಆರೋಗ್ಯ ಸಮಸ್ಯೆಗಳು ಉಂಟಾಗಿದ್ದರಿಂದ ಕೋಮಾಗೆ ಜಾರಿದ್ದ ಅವರು ನಿನ್ನೆ ಸಂಜೆ ನಿಧನರಾಗಿದ್ದಾರೆ.