ರಾಮಜನ್ಮ ಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ….

Promotion

ಮೈಸೂರು,ಮೇ,30,2020(www.justkannada.in): ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮೈಸೂರಿನಲ್ಲಿ ವಿರೋಧ ವ್ಯಕ್ತವಾಗಿದ್ದು ರಾಮಮಂದಿರ ನಿರ್ಮಾಣಕ್ಕೆ ತಡೆ ನೀಡುವಂತೆ ಆಗ್ರಹಿಸಿ ದಸಂಸ ಪ್ರತಿಭಟನೆ ನಡೆಸಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ದಸಂಸ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂದರ್ಭದಲ್ಲಿ ಬೌದ್ದ ಧರ್ಮದ ಕುರುಹುಗಳು ಸಿಕ್ಕಿವೆ. ರಾಮಮಂದಿರಕ್ಕಿಂತ ಇಲ್ಲಿ ಬೌದ್ಧ ಸ್ತೂಪ ಇತ್ತು ಎನ್ನುವುದು ಸಾಭಿತಾಗಿದೆ. ಈಗಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ಮರು ಪರಿಶೀಲನೆ ನಡೆಸಬೇಕು‌. ರಾಮಮಂದಿರ ನಿರ್ಮಾಣಕ್ಕೆ ತಡೆ ನೀಡಬೇಕು ಎಂದು  ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

Key words: Protest – Mysore — construction – Ram Mandir – Ayodhya