ಪಿಎಸ್ಐ ನೇಮಕಾತಿ ಮರು ಪರೀಕ್ಷೆ: ನ್ಯಾಯಾಲಯದ ಆದೇಶದ ಪ್ರಕಾರ ಕ್ರಮ ಎಂದ ಪ್ರವೀಣ್ ಸೂದ್

Promotion

ಬೆಂಗಳೂರು, ಜನವರಿ 29, 2023 (www.justkannada.in): ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸಲು ನಾವು ಸಿದ್ಧರಿರೋದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

545 ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದ ಕಾರಣ ನೇಮಕಾತಿಯನ್ನೇ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸೋದಾಗಿಯೂ ಹೇಳಿತ್ತು.

ಈ ಕುರಿತಂತೆ ಟ್ವಿಟ್ ಮಾಡಿರುವ ಪ್ರವೀಣ್ ಸೂದ್, ಆರ್ ಎಸ್‌ಐ ( ಸಿಎಆರ್ ಮತ್ತು ಡಿಎಆರ್ ), ವಿಶೇಷ ಆರ್ ಎಸ್‌ಐ ( ಕೆ ಎಸ್ ಆರ್ ಪಿ ) ಹಾಗೂ ಪಿಎಸ್‌ಎ ( ರಾಜ್ಯ ಕೈಗಾರಿಕಾ ಭದ್ರತಾ ಪಡೆ)ಗಳಿಗೆ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

545 ಪಿಎಸ್‌ಐ ನೇಮಕಾತಿ ಸಂಬಂಧ ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಈ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.