ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ(85) ಇನ್ನಿಲ್ಲ….

Promotion

ಬೆಂಗಳೂರು,ಮೇ,2,2019(www.justkannada.in):  ಲಂಚಾವತಾರ ನಾಟಕದ ಮೂಲಕ ಮನೆ ಮಾತಾಗಿದ್ದ ಹಿರಿಯ ನಟ ರಂಗಕರ್ಮಿ ಮಾಸ್ಪರ್ ಹಿರಣ್ಣಯ್ಯ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

85 ವರ್ಷದ ಹಿರಣ್ಣಯ್ಯ ಬೆಂಗಳೂರಿನ ಬಿಜಿಎಸ್‌ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಮಾಸ್ಟರ್ ಹಿರಣ್ಣಯ್ಯ ಅವರು  ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಪತ್ನಿ ಮತ್ತು ಐವರು ಮಕ್ಕಳನ್ನ ಮಾಸ್ಟರ್ ಹಿರಣ್ಣಯ್ಯ ಅವರು ಅಗಲಿದ್ದಾರೆ. ಲಂಚಾವತಾರ ಎಂಬ ನಾಟಕದಿಂದ ಮಾಸ್ಟರ್ ಹಿರಣ್ಣಯ್ಯ ಖ್ಯಾತರಾಗಿದ್ದರು. ಇವರು ರಾಜ್ಯೋತ್ಸವ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನ ಪಡೆದಿದ್ದರು. ಕೆರ್ ಆಫ್ ಪುಟ್ ಬಾತ್, ಶಾಂತಿ ನಿವಾಸ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದರು.

Key words: Senior actor- Rangarakshmi -Master Hirannayya – no more.