ಹಿರಿಯ ನಿರ್ದೇಶಕ ಎಸ್​.ಕೆ. ಭಗವಾನ್ ನಿಧನಕ್ಕೆ ಸಿಎಂ ಬೊಮ್ಮಾಯಿ ಮತ್ತು ಸಿದ್ಧರಾಮಯ್ಯ ಸಂತಾಪ.

Promotion

ಬೆಂಗಳೂರು,ಫೆಬ್ರವರಿ,20,2023(www.justkannada.in): ಹಿರಿಯ ನಿರ್ದೇಶಕ ಎಸ್​.ಕೆ. ಭಗವಾನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ದೇಶಕ ಶ್ರೀ ಎಸ್. ಕೆ. ಭಗವಾನ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ಬೇಸರವಾಯಿತು. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಕುಟುಂಬವರ್ಗದವರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇನ್ನು ಸಿದ್ಧರಾಮಯ್ಯ ಟ್ವೀಟ್ ಮಾಡಿ ‘ಕನ್ನಡ ಕಲಾ ಜಗತ್ತು ಮತ್ತು ಸಿನಿಮಾ ಪ್ರಪಂಚವನ್ನು ಬೆಳಗಿ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸಿದ್ದ ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅಭಿಮಾನಿಗಳು ಮತ್ತು ಕುಟುಂಬ ವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂಬುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ದೊರೈ-ಭಗವಾನ್ ಜೋಡಿಯು ಕನ್ನಡ ಚಿತ್ರರಂಗಕ್ಕೆ ಅನೇಕ ಸದಭಿರುಚಿಯ ಚಿತ್ರಗಳನ್ನು ನೀಡಿದೆ. ಡಾ. ರಾಜ್‌ ಕುಮಾರ್ ನಟನೆಯ ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಹೊಸ ಬೆಳಕು’ ಸೇರಿದಂತೆ 55 ಚಿತ್ರಗಳನ್ನು ಸ್ನೇಹಿತ ದೊರೈ ರಾಜ್‌ ಜೊತೆ ಸೇರಿ ನಿರ್ದೇಶಿಸಿದ್ದರು.

Key words: Senior Director -S.K. Bhagavan-death- CM Bommai -Siddaramaiah -condoled