ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು…

kannada t-shirts

ಶಿವಮೊಗ್ಗ,ಜ,23,2020(www.justkannada.in):   ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿ ಇದರಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜ್ಞಾನಮೂರ್ತಿ(65), ಚೆನ್ನೇಶ್(37) ಮೃತಪಟ್ಟವರು. ರತ್ನಮ್ಮ ಎಂಬುವವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕುಟುಂಬದ ಈ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words: shivamogga-Three – same family- attempt -suicide -Two -deaths

website developers in mysore