“ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ, ಜೆ.ಡಿ.ಎಸ್ ಅಧಿಕಾರಕ್ಕೆ ಬರಲ್ಲ” :ಸಚಿವ ಕೆ.ಎಸ್.ಈಶ್ವರಪ್ಪ ಟೀಕೆ

Promotion

ಮೈಸೂರು,ಜನವರಿ,11,2021(www.justkannada.in) : ಮತ್ತೆ ಸಿಎಂ ಆಗುತ್ತೇವೆ ಎಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹಗಲು ಕನಸು ಕಾಣುತ್ತಿದ್ದಾರೆ. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆ.ಡಿ.ಎಸ್ ಅಧಿಕಾರಕ್ಕೆ ಬರುವುದಿಲ್ಲ‌ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು.jk-logo-justkannada-mysore

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ, 2023ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂಬ ವಿಚಾರ ಕುರಿತು ಮಾತನಾಡಿದ ಅವರು, ಕೆಲವರು ಹಗಲು ಕನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ‌ ಎಂದರು.

 

Siddaramaiah-Again-Not CM-JDS party-power-Not coming-Minister-K.S.Eshwarappa 

ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗ್ತಿನಿ ಅಂತಿದ್ದಾರೆ. ಅವರ ಪಕ್ಷದವರು ಯಾರಾದರು ಹೇಳಿದ್ದಾರಾ?, ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದು ಹಗಲು ಕನಸು ಎಂದು ವ್ಯಂಗ್ಯವಾಗಿ ಹೇಳಿದರು.

key words : Siddaramaiah-Again-Not CM-JDS party-power-Not coming-Minister-K.S.Eshwarappa