ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

ಬೆಂಗಳೂರು, ಆಗಸ್ಟ್ 1, 2021 (www.justkannada.in): ರಾಜ್ಯ ಸರಕಾರ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ.

2021-22 ನೇ ಸಾಲಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

2021-22 ನೇ ಸಾಲಿಗೆ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಒಟ್ಟಾರೆಯಲ್ಲಿ 10,347.25 ಲಕ್ಷಗಳ ಅನುದಾನವನ್ನು ಕೋವಿಡ್ 19 ವಿಶೇಷ ಪ್ಯಾಕೇಜ್ ಪರಿಹಾರ ಧನವಾಗಿ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.