ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ : ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ.

Promotion

ಬೆಂಗಳೂರು,ಆಗಸ್ಟ್,4,2021(www.justkannada.in):  ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು  29 ಮಂದಿ ನೂತನ ಸಚಿವರು ಸೇರ್ಪಡೆಯಾಗಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದ ನೂತನ ಸಚಿವರು ಇಂದು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು.

ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಸಿ ಪಾಟೀಲ್, ಉಮೇಶ್ ಕತ್ತಿ, ಎಸ್.ಅಂಗಾರ, ಅರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಶಿವರಾಂ ಹೆಬ್ಬಾರ್, ವಿ.ಸೋಮಣ್ಣ, ಜೆ.ಸಿ ಮಾದುಸ್ವಾಮಿ, ಸಿ.ಎನ್ ಅಶ್ವಥ್ ನಾರಾಯಣ್, ಸಿಸಿ ಪಾಟೀಲ್, ಆನಂದ್ ಸಿಂಗ್, ಎಸ್ ಟಿ ಸೋಮಶೇಖರ್, ಕೋಟಾ ಶ್ರೀನಿವಾಸ್ ಪೂಜಾರಿ, ಡಾ.ಕೆ.ಸುಧಾಕರ್, ಎಂಟಿಬಿ ನಾಗರಾಜ್, ಶಶಿಕಲಾ ಜೊಲ್ಲೆ, ಕೆಸಿ ನಾರಾಯಣಗೌಡ, ಬಿಸಿ ನಾಗೇಶ್, ಸುನೀಲ್ ಕುಮಾರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಂದುವರೆದಿದೆ.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.

Key words: Structure – State Cabinet-Sworn -new minister.