ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ…

Supreme Court - stay - SSLC -examination - state.
Promotion

ನವದೆಹಲಿ,ಜೂ,9,2020(www.justkannada.in):  ರಾಜ್ಯದಲ್ಲಿ ಕೊರೋನಾ ವೈರಸ್ ಹರಡುತ್ತಿದ್ದು ಈ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದೆ.

ಬೆಳಗಾವಿ ಮೂಲದ ರಾಜಶ್ರೀ ಎಂಬುವವರು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ತಡೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಪರೀಕ್ಷೆಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್ ಪರೀಕ್ಷೆಗೆ ತಡೆ ನೀಡಲು ನಿರಾಕರಿಸಿ ಮುಂಜಾಗ್ರತೆ ವಹಿಸಿ ಪರೀಕ್ಷೆ ನಡೆಸುವಂತೆ ಸೂಚಿಸಿತ್ತು.

ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ತಡೆ ನೀಡುವಂತೆ ಮನವಿ ಮಾಡಿದ್ದಾರೆ.

Key words: Supreme Court – stay – SSLC -examination – state.