ಪರಿಶಿಷ್ಠ ಸಮುದಾಯದ ಜನರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರಕಾರ

Promotion

ಬೆಂಗಳೂರು, ಸೆಪ್ಟೆಂಬರ್ 19, 2021 (www.justkannada.in): ರಾಜ್ಯ ಸರಕಾರ ಪರಿಶಿಷ್ಠ ಸಮುದಾಯದ ಜನರಿಗೆ ಗುಡ್ ನ್ಯೂಸ್ ನೀಡಿದೆ.

ಪರಿಶಿಷ್ಠ ಜಾತಿಯ ಜನ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲು 680 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಲ್ ನರಸಿಂಹಮೂರ್ತಿ ಆದೇಶ ಹೊರಡಿಸಿದ್ದಾರೆ.

ಲೋಕೋಪಯೋಗಿ ಇಲಾಖೆಗೆ ಕಾಮಗಾರಿಗೆ ನಿಗದಿಯಾಗಿರುವ ಒಟ್ಟು 680 ಕೋಟಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಶೇ.40ರಷ್ಟು ಅನುದಾನವನ್ನು ಒಟ್ಟು ರೂ.384 ಕೋಟಿ ಮಂಜೂರಾತಿ ನೀಡಲಾಗಿದೆ.

ಮೊದಲ ಕಂತಿನಲ್ಲಿ ರೂ.192 ಕೋಟಿಗಳ ಶೇ.50ರಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಲ್ ನರಸಿಂಹಮೂರ್ತಿ ತಿಳಿಸಿದ್ದಾರೆ.

key words: state government gave good news to the people of the Scheduled Castes