ತಜ್ಞರ ವರದಿ ಆಧರಿಸಿ ಟಫ್ ರೂಲ್ಸ್ ಸಡಿಲಿಕೆ ಬಗ್ಗೆ ನಿರ್ಧಾರ- ಸಿಎಂ ಬೊಮ್ಮಾಯಿ.

Promotion

ಬೆಂಗಳೂರು,ಜನವರಿ,29,2022(www.justkannada.in):  ತಜ್ಞರ ವರದಿ ಆಧರಿಸಿ ಟಫ್ ರೂಲ್ಸ್ ಸಡಿಲಿಕೆ ಮಾಡುವ ಕುರಿತು ತೀರ್ಮಾನ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿರ್ವಹಣೆ ಸಂಬಂಧ ಇಂದು ತಜ್ಞರು ಸಚಿವರು, ಅಧಿಕಾರಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ಚರ್ಚಿಸಲಿದ್ದಾರೆ.  ಸಭೆಯಲ್ಲಿ ನೈಟ್ ಕರ್ಫ್ಯೂ, 50:50 ನಿಯಮಗಳ ಬಗ್ಗೆ ಚರ್ಚಿಸಲಿದ್ದು ನಿಯಮ ಸಡಿಲಿಸಲಿದ್ದಾರಾ ಕಾದು ನೋಡಬೇಕಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ತಜ್ಞರ ವರದಿ ಆದರಿಸಿ ಟಫ್ ರೂಲ್ಸ್ ಸಡಿಲಿಕೆ ಬಗ್ಗೆ ನಿರ್ಧರಿಸಲಾಗುತ್ತದೆ. ಕೋವಿಡ್ ನಿಯಮ ಸಡಿಲಿಕೆ ಕುರಿತು, ಕೊರೋನಾ ಸ್ಥಿತಿಗತಿ ಬಗ್ಗೆ ತಜ್ಞರ ಜತೆ ಸಭೆ ನಡೆಸಿ ಚರ್ಚೆ ಮಾಡಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಆಧರಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Key words: Tough rules-  expert report – CM Bommai.