ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ.

kannada t-shirts

ಮೈಸೂರು,ಮಾರ್ಚ್,1,2022(www.justkannada.in): ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡುವಂತೆ ಒತ್ತಾಯಿಸಿ  ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.

ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ವಾಟಾಳ್ ನಾಗರಾಜ್, ಉಕ್ರೇನ್ ನಲ್ಲಿರೋ ಕನ್ನಡಿಗರ ರಕ್ಷಣೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಪೋಷಕರ ಗೋಳಾಡುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಅವರನ್ನು ಸುರಕ್ಷಿತವಾಗಿ ವಾಪಸ್ಸ್ ಕರೆತರಲು ವಿಳಂಬ ಮಾಡ್ತಿದೆ. ವಿದೇಶಾಂಗ ಸಚಿವಾಲಯದ ತಮ್ಮ ಜವಾಬ್ದಾರಿಯನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ. ಕರ್ನಾಟಕದ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಆಗ್ರಹಿಸಿದರು.

ರಾಜ್ಯ ಬಜೆಟ್ ನಲ್ಲಿ ಸರ್ಕಾರ ತಾರತಮ್ಯ ಆರೋಪ ಸಂಬಂಧ, ಉತ್ತರ ಕರ್ನಾಟಕಕ್ಕೆ ಸರಿಯಾದ ರೀತಿಯಲ್ಲಿ ಅನುದಾನ ನೀಡುತ್ತಿಲ್ಲ. ಈ ಬಾರಿಯ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಹೆಚ್ಚಿನ ಅನುದಾನ ನೀಡಬೇಕು. ಹಿಂದಿನಿಂದಲೂ ಬೆಳಗಾವಿ ಭಾಗದ ಜನರು ಶೋಷಣೆಗೆ ಒಳಗಾಗಿದ್ದಾರೆ. ಅವರ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು‌.

ಗಡಿನಾಡ ಕನ್ನಡಿಗರಿಗೆ 500 ಕೋಟಿ ಅನುದಾನ ಮೀಸಲಿಡಿ ಎಂದು ಆಗ್ರಹಿಸಿದ ವಾಟಾಳ್ ನಾಗರಾಜ್, ಮುಜರಾಯಿ ಇಲಾಖೆಯ ದೇವಾಲಯಗಳ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿರೋದು ಖಂಡನೀಯ. ದೇವಾಲಯಗಳ ಖಾಸಗೀಕರಣದ ದೊಡ್ಡ ಪಿತೂರಿ ನಡೆಯುತ್ತಿದೆ. ದೇವಾಲಯಗಳ ಲೂಟಿ ಮಾಡಲು ಮುಂದಾಗಿದೆ‌. ಯಾವುದೇ ಕಾರಣಕ್ಕೂ ದೇವಾಲಯಗಳ ಖಾಸಗೀಕರಣ ಆಗಬಾರದು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕನ್ನಡ ಚಳುವಳಿ ಮುಖಂಡ ತಾಯೂರು ವಿಠ್ಠಲಮೂರ್ತಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Key words: Vatal Nagaraj- protests -protection -Ukraine

website developers in mysore