ಪಶುವೈದ್ಯೆ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ವಿಚಾರ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು…

ಹೈದ್ರಾಬಾದ್‌ ,ಡಿ,6,2019(www.justkannada.in):  ಪಶುವೈದ್ಯೆ ದಿಶಾ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನ  ಹೈದರಾಬಾದ್ ಪೊಲೀಸರು ಎನ್ ಕೌಂಟರ್  ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದೆ.

ಎನ್ ಕೌಂಟರ್ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಘಟನಾಸ್ಥಳಕ್ಕೆ ಸತ್ಯಶೋಧನಾ ತಂಡ ಕಳುಹಿಸಿದೆ. ಅಲ್ಲದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವಂತೆ ಆಯೋಗ ಸೂಚನೆ ನೀಡಿದೆ ಎನ್ನಲಾಗಿದೆ.

ರಾಷ್ಟ್ರೀಯ ಮಾನವಹಕ್ಕುಗಳ ಆಯೋಗ ಹೈದ್ರಾಬಾದ್ ಎನ್ ಕೌಂಟರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು. ಎನ್ ಕೌಂಟರ್ ನಡೆದ ಹೈದ್ರಾಬಾದ್ ಹೊರವಲಯ ಚಟಾನ್ ಪಲ್ಲಿ ಸ್ಥಳಕ್ಕೆ ರಾಷ್ಟ್ರೀಯ ಮಾನವಹಕ್ಕು ಆಯೋಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಲಿರುವ ಅಧಿಕಾರಿಗಳ ತಂಡ, ಈ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿ ವರದಿ ನೀಡಲಿದೆ.

Key words: veterinarydoctor- rape- accused-enCounter – Complaint – National Human Rights Commission