ಪ್ರಧಾನಿ ಮೋದಿ ಶಕ್ತಿ ಕುಗ್ಗಿಸಲು ಆರ್ ಜೆಡಿ, ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್..

Promotion

ಬೆಂಗಳೂರು,ಫೆಬ್ರವರಿ,18,2021(www.justkannada.in):  ಪ್ರಧಾನಿ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.jk

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ  ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಕುಗ್ಗಿಸಲು ವಿಜಯೇಂದ್ರ ಬಿಹಾರ ಚುನಾವಣೆಗೆ ಫಂಡಿಂಗ್ ಮಾಡಿದ್ದಾರೆ. ಅಲ್ಲಿ ಬಿಜೆಪಿ ಸೋಲಿಸಲು ಆರ್ ಜೆಡಿ, ಕಾಂಗ್ರೆಸ್ ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ನನೆಗೆ ಬಿಜೆಪಿ ಹೈಕಮಾಂಡ್ ನಿಂದ ಶೋಕಾಸ್ ನೋಟಿಸ್  ಬಂದಿತ್ತು.  ನೋಟೀಸ್ ಗೆ 11 ಪುಟಗಳಷ್ಟು 45 ಅಂಶಗಳನ್ನ ಉಲ್ಲೇಖಿಸಿ ಉತ್ತರ ನೀಡಿದ್ದೇನೆ. ಆದರೆ ಪತ್ರದಲ್ಲಿ ಎಲ್ಲಿಯೂ ವಿಷಾದ ವ್ಯಕ್ತಪಡಿಸಿಲ್ಲ. ಕ್ಷಮೆ ಕೋರಿಲ್ಲ.  ಯಡಿಯೂರಪ್ಪ ಕುಟುಂಬದ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಶಾಸಕ ಯತ್ನಾಳ್ ಹೇಳಿದರು.Vijayendra- Funding - reduce -PM Modi's- power-MLA -Basanagowda Patil Yatnal -Bomb.

ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಷ್ಟು ಹಣ ಕಳುಹಿಸಿದ್ದಾರೆ, ವಿಜಯೇಂದ್ರ ಅವರ ಆಪ್ತರ ಮೂಲಕ ಹಣ ಎಷ್ಟು ಕಳುಹಿಸಿದ್ದರು ಎಂಬುದರ ಬಗ್ಗೆ ತನಿಖೆಯಾಗಬೇಕು. ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಹೇಳಿದ್ದೇನೆ  ಎಂದು ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಕಿಡಿಕಾರಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ರಾಮಮಂದಿರ ನಿರ್ಮಾಣಕ್ಕೆ ಹಣ ನೀಡುವುದಿದ್ದರೇ ನೀಡಲಿ. ಇಲ್ಲದಿದ್ದರೇ ಸುಮ್ಮನಿರಲಿ ಎಂದು ಟಾಂಗ್ ನೀಡಿದರು.

Key words: Vijayendra- Funding – reduce -PM Modi’s- power-MLA -Basanagowda Patil Yatnal -Bomb.