ರಾಜ್ಯದಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮತದಾನ ಆರಂಭ …!

Promotion

ಬೆಂಗಳೂರು,ಡಿಸೆಂಬರ್,27,2020(www.justkannada.in) : ರಾಜ್ಯದಲ್ಲಿ 2 ನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ಮತದಾರರು ಬೆಳಗ್ಗೆಯೇ ಉತ್ಸಾಹದಿಂದ ಮತದಾನದಲ್ಲಿ ಭಾಗಿಯಾಗಿದ್ದಾರೆ.Teachers,solve,problems,Government,bound,Minister,R.Ashok

ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ಗಲಾಟೆ ನಡೆದಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ ಇದರಿಂದಾಗಿ ಚುನಾವಣೆ ಅಧಿಕಾರಿಗಳು ಮತದಾನ ಸ್ಥಗಿತಗೊಳಿಸಿದ್ದಾರೆ.

ಅಭ್ಯರ್ಥಿ ಚಿಹ್ನೆ ಬದಲಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ತಾಲ್ಲೂಕಿನ ಕಲಾದಗಿ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಸ್ಥಗಿತಗೊಳಿಸಲಾಗಿದೆ.

Voting-begins-2nd phase-Gram Panchayat-electionsಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕು ವ್ಯಾಪ್ತಿಯ ಕೂಡಲ ಸಂಗಮದ ಮತಗಟ್ಟೆ ಸಂಖ್ಯೆ 3 ರಲ್ಲಿ ಮತದಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

key words : Voting-begins-2nd phase-Gram Panchayat-elections