ವಿಶ್ವಕಪ್ ಕ್ರಿಕೆಟ್: ಇಂದು ಬಾಂಗ್ಲಾ ವಿರುದ್ಧ ಟೀಂ ಇಂಡಿಯಾ ಅಭ್ಯಾಸ ಪಂದ್ಯ !

Promotion

ಇಂಗ್ಲೆಂಡ್, ಮೇ 28, 2019 (www.justkannada.in): ಐಸಿಸ್ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಇಂದು ಟೀಂ ಇಂಡಿಯಾ ಬಾಂಗ್ಲಾದೇಶ ಎದುರಿಸಲಿದೆ.

ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋತಿರುವ ಭಾರತ ಟೂರ್ನಿಗೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಬಾಂಗ್ಲಾದೇಶದ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ.

ನ್ಯೂಜಿಲೆಂಡ್ ವಿರುದ್ಧ ಆಲ್ ರೌಂಡರ್ ರವೀಂದ್ರ ಜಡೇಜಾ ಹೊರತುಪಡಿಸಿ ಉಳಿದ ಬ್ಯಾಟ್ಸ್ ಮೆನ್ ಗಳು ಸಂಪೂರ್ಣ ವೈಫಲ್ಯ ಅನುಭವಿಸಿದ್ದರು. ಮತ್ತೊಂದೆಡೆ ಮಳೆಯಿಂದಾಗಿ ಪಾಕಿಸ್ತಾನ ವಿರುದ್ಧ ಅಭ್ಯಾಸ ತಪ್ಪಿಸಿಕೊಂಡಿದ್ದ ಬಾಂಗ್ಲಾ ಪಡೆ ಗೆಲುವಿಗಾಗಿ ಸಿದ್ಧತೆ ನಡೆಸಿದೆ.