ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ  : ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

Promotion

ಬೆಂಗಳೂರು,ಡಿಸೆಂಬರ್,25,2020(www.justkannada.in) : ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ ಅವರ ಭವಿಷ್ಯದ ದೃಷ್ಟಿಯಿಂದ ಇಂಥ ಹೇಳಿಕೆಗಳನ್ನು ಕೊಡದಿರಲಿ. ಅವರು ಪಕ್ಷದ ಅಧ್ಯಕ್ಷರಲ್ಲ. ಬೀದಿಯಲ್ಲಿ ಮಾತಾಡೋದು ಯತ್ನಾಳ್ ಗೆ ಶೋಭೆ ತರಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆಕ್ರೋಶವ್ಯಕ್ತಪಡಿಸಿದ್ದಾರೆ.Teachers,solve,problems,Government,bound,Minister,R.Ashok

ಸಂಪುಟ ವಿಸ್ತರಣೆ ಆಗುತ್ತೋ ಇಲ್ಲಾ ಬದಲಾವಣೆ ಆಗುತ್ತೋ ಗೊತ್ತಿಲ್ಲ ಎಂಬ ಯತ್ನಾಳ್ ಹೇಳಿಕೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿಟ್ಟಾಗಿದ್ದಾರೆ.

ಕೆಲವರಿಗೆ ಕೆಲವು ಸಂದರ್ಭ, ಸಮಯ ಬರುತ್ತದೆ. ಜೊತೆಗೆ, ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಕೆಲವರು ಹೀಗೆ ಮಾತಾಡುತ್ತಾರೆ ಎಂದಿದ್ದಾರೆ.

ಶಾಸಕ ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್  ಮಾತನಾಡಿ, ಯತ್ನಾಳ್ ಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರ ಇದೆ. ಈ ಬೇಸರದಿಂದ ಯತ್ನಾಳ್ ಇಂತಹ ಹೇಳಿಕೆ ಕೊಡ್ತಿದ್ದಾರೆ ಎಂದು ಹೇಳಿದ್ದಾರೆ.ayurvedic-medicine-rapid-genocidal-union-minister-d-v-sadananda-gowda

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಯತ್ನಾಳ್ ಅವರ ಹೇಳಿಕೆಗಳನ್ನು ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ಸಂದರ್ಭದಲ್ಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

key words : Yatnal-Ordinary-MLA-Union-Minister-D.V. Sadananda Gowda