Friday, September 18, 2026

BDA Apartments

50 ವರ್ಷಗಳಿಂದ ಪತ್ರಿಕೆ ವಿತರಣೆಯ ಕಾಯಕ: ರಮಾದೇವಿ ಅವರಿಗೆ ಸನ್ಮಾನ BDA JK_Adv BDA Adv
Home Front Page 50 ವರ್ಷಗಳಿಂದ ಪತ್ರಿಕೆ ವಿತರಣೆಯ ಕಾಯಕ: ರಮಾದೇವಿ ಅವರಿಗೆ ಸನ್ಮಾನ

50 ವರ್ಷಗಳಿಂದ ಪತ್ರಿಕೆ ವಿತರಣೆಯ ಕಾಯಕ: ರಮಾದೇವಿ ಅವರಿಗೆ ಸನ್ಮಾನ

ಮೈಸೂರು,ಸೆಪ್ಟಂಬರ್,4,2024 (www.justkannada.in):  ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ನಗರದ ಸಂತೆಪೇಟೆಯಲ್ಲಿ 50 ವರ್ಷದಿಂದ ಪತ್ರಿಕೆ ವಿತರಣೆ ಮಾಡುತ್ತಿರುವ ರಮಾದೇವಿ ಅವರಿಗೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಜನಸಾಮಾನ್ಯರಿಗೆ ಬೆಳಗ್ಗೆ ಏಳುತ್ತಲೇ ಪತ್ರಿಕೆ ಓದುವ ಹವ್ಯಾಸ ಇರುವುದು ಸಹಜ. ಅದನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯವಾಗಿದೆ. ಬೇಸಿಗೆ, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ. ಈ ನಿಟ್ಟಿನಲ್ಲಿ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು. ಎಂದರು.

ನಂತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಿಕಾ ವಿತರಕರಾದ ರಮಾದೇವಿ, ಪತ್ರಿಕ ವಿತರಕರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ಸಾಮಾಜಿಕ ಭದ್ರತೆ ಕೊಡಬೇಕು, ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ಕೊಡಬೇಕು  ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಈ ವೇಳೆ ಸಂದರ್ಭದಲ್ಲಿ  ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ಅಶ್ವಿನಿ ಗೌಡ, ಪಾಂಡು, ಹಾಗೂ ಇನ್ನಿತರರು ಹಾಜರಿದ್ದರು.

Key words: Newspaper, distributer, Ramadevi, Tribute, Mysore