ಮುಂದಿನ ಮೂರು ತಿಂಗಳು ಭಾರತ ಸೇರಿ ಜಗತ್ತಿಗೆ ಭಾರೀ ಕಂಟಕ: ಕೋಡಿ ಮಠದ ಶ್ರೀಗಳ ಭವಿಷ್ಯ

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ಮುಂದಿನ ಮೂರು ತಿಂಗಳು ಭಾರತ ಸೇರಿದಂತೆ ಇಡೀ ಜಗತ್ತಿಗೆ ಭಾರೀ ಕಂಟಕ ಕಾದಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಕೋಡಿಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಕಾರ್ತಿಕ, ಮಾರ್ಗಶಿರದಿಂದ ತೊಡಗಿ ಜನವರಿ ಪ್ರಥಮ ಭಾಗದವರೆಗೆ ಭಾರಿ ಲೋಕ ಕಂಟಕವಿದೆ. ಅದು ಭೂ ಕಂಟಕದ ರೂಪದಲ್ಲಿರಬಹುದು, ಪ್ರಾದೇಶಿಕವಾಗಿಯೂ ಸಂಘರ್ಷವಿರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಜಾಗತಿಕವಾಗಿ ಬಾಂಬ್‌ ಗಳು , ಭೂಕಂಪ, ಯದ್ಧ ಭೀತಿ ಇದೆ. ಇದು ಕೇವಲ ಜಗತ್ತಿಗೆ ಸಂಬಂಧಿಸಿದ್ದಲ್ಲ, ದೇಶಿಯಾಗಿ ಕೆಲವೊಂದು ಕಂಟಕಗಳಿವೆ ಎಂದು ಹೇಳಿದ್ದಾರೆ.

ಜನ ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುತ್ತಾರೆ. ಹೆಚ್ಚಿನವರಿಗೆ ದೈಹಿಕ ಅಶಕ್ತಿ ಕಾಡಲಿದೆ ಎಂದು ಹೇಳಿದ್ದಾರೆ.