ದಾವೂದ್ ಇಬ್ರಾಹಿಂ, ಛೋಟಾ ಶಕೀಲ್ ಸೇರಿ ಡಿ-ಕಂಪನಿ ಮೂವರ ವಿರುದ್ಧ ಎನ್ಐಎ ಚಾರ್ಜ್ ಶೀಟ್

ಬೆಂಗಳೂರು, ನವೆಂಬರ್ 06, 2022 (www.justkannada.in): ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಆತನ ಆಪ್ತ ಸಹಾಯಕ ಛೋಟಾ ಶಕೀಲ್ ಮತ್ತು ಡಿ-ಕಂಪನಿಯ ಇತರ ಮೂವರು ಸದಸ್ಯರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಚಾರ್ಜ್ ಶೀಟ್ ಸಲ್ಲಿಸಿದೆ.

ಆರೀಫ್ ಅಬೂಬಕರ್ ಶೇಖ್ ಅಲಿಯಾಸ್ ಆರೀಫ್ ಭಾಯಿಜಾನ್, ಶಬ್ಬೀರ್ ಅಬೂಬಕರ್ ಶೇಖ್ ಅಲಿಯಾಸ್ ಶಬ್ಬೀರ್, ಮೊಹಮ್ಮದ್ ಸಲೀಂ ಖುರೇಷಿ ಅಲಿಯಾಸ್ ಸಲೀಂ ಫ್ರೂಟ್, ದಾವೂದ್ ಇಬ್ರಾಹಿಂ ಕಸ್ಕರ್ ಅಲಿಯಾಸ್ ಶೇಖ್ ದಾವೂದ್ ಹಸನ್ ಮತ್ತು ಶಕೀಲ್ ಛೋಕ್ತಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA), ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಮತ್ತು ಭಾರತ ದಂಡ ಸಂಹಿತೆ (IPC) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಆರೋಪಿಗಳು ವಿವಿಧ ರೀತಿಯ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಮೂಲಕ ಗ್ಯಾಂಗ್‌ನ ಅಪರಾಧ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಸಂಚು ರೂಪಿಸಿದ್ದಾರೆ ಎಂದು ತನಿಖೆಗಳು ದೃಢಪಡಿಸಿವೆ.