ದೇಶದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ ​​ಐಎ ದಾಳಿ, ಶೋಧ: 13 ಜನ ಶಂಕಿತ ಉಗ್ರರ ಬಂಧನ

ಬೆಂಗಳೂರು, ಡಿಸೆಂಬರ್​, 9,2023(www.justkannada.in):   ಇಂದು ಬೆಳ್ಳಂ ಬೆಳಿಗ್ಗೆ ಕರ್ನಾಟಕ ಮತ್ತು ಮಹಾರಾಷ್ಟ್ರದ 44 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ದಾಳಿ ನಡೆಸಿದ್ದು ಶೋಧ ಕಾರ್ಯ ನಡೆಸಿದೆ.

ಕರ್ನಾಟಕದ 1, ಪುಣೆಯಲ್ಲಿ 2, ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರದಲ್ಲಿ 9 ಮತ್ತು ಭಾಯಂದರ್‌ನಲ್ಲಿ 1 ಸ್ಥಳಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಈವರೆಗೆ 13 ಜನ ಶಂಕಿತ ಉಗ್ರರನ್ನು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಪುಲಿಕೇಶಿನಗರದ ಮೋರ್ ರಸ್ತೆಯ ಬಿಲ್ಡಿಂಗ್ ನ 3ನೇ ಮಹಡಿಯಲ್ಲಿ ಎನ್‌ಐಎ  ಅಧಿಕಾರಿಗಳೂ ಕಾರ್ಯಚರಣೆ ನಡೆಸಿದರು. ಈ ವೇಳೆ ನಗರದಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರನಿಂದ 16 ಲಕ್ಷ 42 ಸಾವಿರ ನಗದು ಜಪ್ತಿ ಮಾಡಿಕೊಂಡಿದ್ದಾರೆ. ಶಂಕಿತ ಉಗ್ರ ಬೆಂಗಳೂರಿನಲ್ಲಿ ಡಾಟಾ ಕನ್ಸಲ್‌ ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ.

ಶಂಕಿತ ಉಗ್ರರು ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕೆ ವ್ಯಕ್ತವಾಗಿತ್ತು. ಶಂಕಿತ ಉಗ್ರರು ವಿದೇಶಿ ಐಸಿಸ್ ಹ್ಯಾಂಡ್ಲರ್‌ ಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Key words: NIA -raids – more than -40 places-search