“ನೈಟ್ ಕರ್ಫ್ಯೂ ಜಾರಿ, ಯಾವುದೇ ಚರ್ಚೆ ನಡೆದಿಲ್ಲ” : ಗೃಹ ಸಚಿವ ಬಸವರಾಜ ಬೊಮ್ಮಾಯಿ 

ಬೆಂಗಳೂರು,ಮಾರ್ಚ್,14,2021(www.justkannada.in) : ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜಾರಿಯಾಗುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.jkಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಸೋಮವಾರ ಕೋವಿಡ್‌ ನಿಯಂತ್ರಣ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಿಎಂ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಲಿದ್ದಾರೆ. ಆದರೆ ನೈಟ್‌ ಕರ್ಫ್ಯೂ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಸಿ.ಡಿ ವಿಚಾರವಾಗಿ ಸದನದಲ್ಲಿ ಪ್ರಸ್ತಾಪ ಮಾಡುವುದಾಗಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸಿಡಿ ವಿಚಾರವಾಗಿ ಏನು ಬೇಕಾದರೂ ಮಾತನಾಡಲಿ ಎಂದರು.

Night-curfew-enforcement-Any-Talk-No action-Home Minister-Basavaraja Bommai 

ಇನ್ನು ಸಿ.ಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಗೆ ಮತ್ತು ಅವರ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಲು ಹೇಳಿದ್ದೇನೆ, ತನಿಖೆ ವಿಚಾರ ಎಸ್‌ಐಟಿ ನೋಡಿಕೊಳ್ಳುತ್ತಿದೆ ಎಂದರು.

key words : Night-curfew-enforcement-Any-Talk-No action-Home Minister-Basavaraja Bommai