ನೈಟ್ ಕರ್ಫ್ಯೂ:  ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ….

ಬೆಂಗಳೂರು,ಡಿಸೆಂಬರ್,23,2020(www.justkannada.in):  ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂವನ್ನ ಬದಲಾಗಿ ನಾಳೆಯಿಂದ ಜಾರಿ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ನಾಳೆಯಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ  ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ ಕ್ರೈಸ್ತ ಬಾಂಧವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.   24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ.Night curfew- State Government- issued - Guidelines.

ಇನ್ನು ನೈಟ್ ಕರ್ಫ್ಯೂ ವೇಳೆ ಬಸ್, ವಿಮಾನ, ಸಂಚಾರಕ್ಕೆ ಸರ್ಕಾರ ಅವಕಾಶ ನೀಡಿದೆ. ಅಲ್ಲದೆ ಎಲ್ಲಾ ರೀತಿಯ ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ಕಲ್ಪಿಸಿದೆ.

Key words: Night curfew- State Government- issued – Guidelines.