Thursday, August 6, 2026

BDA Apartments

Home Front Page ಮುಂದಿನ ಲೋಕಸಭೆ ಚುನಾವಣೆಗೆ  ಮಂಡ್ಯದಿಂದ ನಿಖಿಲ್ ಸ್ಪರ್ಧೆ- ಹೆಚ್ ಡಿಕೆ ಘೋಷಣೆ.

ಮುಂದಿನ ಲೋಕಸಭೆ ಚುನಾವಣೆಗೆ  ಮಂಡ್ಯದಿಂದ ನಿಖಿಲ್ ಸ್ಪರ್ಧೆ- ಹೆಚ್ ಡಿಕೆ ಘೋಷಣೆ.

ರಾಮನಗರ,ಮಾರ್ಚ್,31,2022(www.justkannada.in):  ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಮಂಡ್ಯದ ಲೋಕಸಭೆ ಕ್ಷೇತ್ರದಿಂದಲ್ಲೆ ಕಣಕ್ಕಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಂದಿನ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ನಿಖಿಲ್ ಕುಮಾರಸ್ವಾಮಿ ಲೋಕಸಭೆಗೆ ನಿಲ್ಲಿಸುತ್ತೇನೆ ಎಂದರು.

ತಮ್ಮ ಮತ್ತು ನಿಖಿಲ್ ವಿರುದ್ಧ ಕೆಲವರು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಒಂದಾಗಿದ್ದರು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

Key words: Nikhil-contest -Mandya –HD Kumaraswamy