ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಮತ್ತು ತಾವು ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ನವದೆಹಲಿ, ಡಿಸೆಂಬರ್ 21,2023(www.justkannada.in): ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ  ಸ್ಪಷ್ಟನೆ ನೀಡಿದ್ದು, ನಿಖಿಲ್ ಕುಮಾರಸ್ವಾಮಿ ಮತ್ತು ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಸ್ಪರ್ಧಿಸಲ್ಲ. ಆದರೆ, 28 ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ. ಇನ್ನು ನನ್ನ ಸ್ಪರ್ಧೆ ಬಗ್ಗೆ ನಮ ಪಕ್ಷದಲ್ಲಿ ತಿರ್ಮಾನ ಮಾಡಿಲ್ಲ. ನಮ್ಮ ಮೇಲಿನ ಅಭಿಮಾನದಿಂದ ಕೆಲವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ನಮ್ಮ ಪಕ್ಷ ಮತ್ತು ಬಿಜೆಪಿಯಲ್ಲಿ ಕೆಲವರು ಅಭಿಪ್ರಾಯ ತಿಳಿಸುತ್ತಿದ್ದಾರೆ. ನಾನು ಮಂತ್ರಿಯಾದರೆ ರಾಜ್ಯಕ್ಕೆ ಆದ್ಯತೆ ಸಿಗಬಹುದು ಎಂಬುದು ಅವರ ಅಭಿಪ್ರಾಯವಾಗಿದೆ ಎಂದು ಹೇಳಿದರು.

ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೈತ್ರಿ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ.  28 ಸ್ಥಾನಗಳನ್ನೂ ಗೆಲ್ಲುವ ಬಗ್ಗೆ ಚರ್ಚೆಯಾಗಿದೆ. ಯಾವ ಕ್ಷೇತ್ರದಲ್ಲಿ ಯಾರು ನಿಲ್ಲಬೇಕು ಎಂಬ ಬಗ್ಗೆ ಅಂತಿಮ ನಿರ್ಣಯ ಮಾಡುತ್ತೇವೆ. ವಿಶ್ವಾಸ ಎರಡು ಪಕ್ಷಗಳ ನಡುವೆ ಮೂಡಬೇಕು. ಅದಕ್ಕೆ ನಾನು ಆದ್ಯತೆ ನೀಡುತ್ತಿದ್ದೇನೆ. ಜನವರಿ ಅಂತ್ಯದೊಳಗೆ ಸರ್ಕಾರದ ವೇದಿಕೆ ಸಿದ್ಧ ಮಾಡುತ್ತೇವೆ ಎಂದು  ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

Key words: Nikhil – contesting-LokSabha elections-Former CM- HD Kumaraswamy-clarified