ಜೆಡಿಎಸ್ ವತಿಯಿಂದ ‘ಧರ್ಮಸ್ಥಳ ಸತ್ಯ’ ಯಾತ್ರೆ-  ನಿಖಿಲ್ ಕುಮಾರಸ್ವಾಮಿ

ಮಂಡ್ಯ,ಆಗಸ್ಟ್,30,2025 (www.justkannada.in): ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಮಾತನಾಡಿದ ಜೆಡಿಎಸ್ ಯವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಧರ್ಮಸ್ಥಳ ವಿರುದ್ಧ ನಿರಂತರ ಅಪಪ್ರಚಾರ ನಡೆಯುತ್ತಿದೆ.  ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ ಉದ್ದೇಶದಿಂದ ಯಾತ್ರೆ ಆಯೋಜನೆ ಮಾಡಲಾಗಿದೆ. ಧರ್ಮಸ್ಥಳದಿಂದ ಸಾಕಷ್ಟು ಸಮಾಜ ಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ಯಾತ್ರೆ ಕೈಗೊಂಡಿದ್ದೇವೆ ಎಂದರು.

ಎಸ್ ಐಟಿ ಸಮರ್ಥವಾಗಿ ತನಿಖೆ ನಡೆಸಿದ್ದೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ ಎಸ್ ಐಟಿ ತನಿಖೆ ಮೇಲೆ ನಿರೀಕ್ಷೆಗಳಿಲ್ಲ.  ಹೀಗಾಗಿ ಎನ್ ಐಎ ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್ ಐಎ ತನಿಖೆ ಅವಶ್ಯಕ ಎಂದು ನಿಖಿಲ್ ಕುಮಾರಸ್ವಾಮಿ  ಹೇಳಿದರು.

Key words: JDS, Dharmasthala Satya Yatra, Nikhil Kumaraswamy