2028ರ ವಿಧಾನಸಭೆ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಏನಂದ್ರು..?

ಬೆಂಗಳೂರು,ಜನವರಿ,9,2026 (www.justkannada.in): 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ  ಮಾತನಾಡಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿರುವ  ನಿಖಿಲ್ ಕುಮಾರಸ್ವಾಮಿ, ನಾನು ರಾಜಕಾರಣ ಮಾಡುವುದಕ್ಕೆ ಬಂದಿದ್ದೇನೆ. ಅದಕ್ಕಾಗಿ ನಾನು ಕೆಲಸ ಮಾಡುತ್ತಿದ್ದೇನೆ ಈ ಬಗ್ಗೆ ಯಾವುದೇ ಪ್ರಶ್ನೆ ಬೇಡ ಎಂದಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ನಿಖಿಲ್ ಕುಮಾರಸ್ವಾಮಿ,  ಸಿನಿಮಾ ಟಿಆರ್ ಪಿ ಯಾವ ರೀತಿ ಕೊಡ್ತಿದೆ ಅನ್ನೋದು ಗೊತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ನಾನು ಹೆಚ್ಚಾಗಿ ಇದ್ದೇನೆ ಎಂದು ತಿಳಿಸಿದರು.

ಪಕ್ಷದಿಂದ ಜಿಟಿ ದೇವೇಗೌಡರು ದೂರ ಇದ್ದಾರೆ ಎಂಬ ವಿಚಾರವಾಗಿ ‍ಪ್ರತಿಕ್ರಿಯಿಸಿದ ಅವರು, ಶಾಸಕ ಜಿಟಿ ದೇವೇಗೌಡರ ಬಗ್ಗೆ ದೊಡ್ಡವರು ಮಾತನಾಡುತ್ತಾರೆ. ಪಕ್ಷದ ಹಿರಿಯರು, ವರಿಷ್ಠರು ಇದ್ದಾರೆ ಅವರೇ ಈ ಪ್ರಶ್ನೆಗೆ ಉತ್ತರ ಕೊಡುತ್ತಾರೆ ಎಂದರು.

Key words: Nikhil Kumaraswamy, 2028 assembly election, contest