ರಾಮನಗರ,ಮಾರ್ಚ್,25,2026 (www.justkannada.in): ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು ಈ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದ್ದು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸಿಲ್ಲ. ಈ ವಿಚಾರವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಉಪಚುನಾವಣೆಗಳಲ್ಲಿ ಜೆಡಿಎಸ್ ಸ್ಪರ್ಧೆ ಮಾಡದೆ ಇರಬಹುದು ಈ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಬಿಜೆಪಿ ನಾಯಕರು ಚರ್ಚಿಸಿದ್ದಾರೆ ಎಂದರು.
ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸಹ ಪ್ರಚಾರ ಮಾಡುತ್ತಾರೆ. ಎರಡು ಕ್ಷೇತ್ರಗಳ ಜೆಡಿಎಸ್ ಮುಖಂಡರಿಗೆ ಸಂದೇಶ ಹೋಗಿದೆ. ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ. ಜೆಡಿಎಸ್ ನಾಯಕರು ಕೂಡ ಹೋಗಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿಸಿದರು.
Key words: By-election,BJP, JDS, Nikhil Kumaraswamy







