Thursday, August 6, 2026

BDA Apartments

Home Front Page ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್: ಹೆಚ್ ಡಿಕೆ, ಬಿಎಸ್ ವೈ ಅಧಿಕೃತ ಘೋಷಣೆ

ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್: ಹೆಚ್ ಡಿಕೆ, ಬಿಎಸ್ ವೈ ಅಧಿಕೃತ ಘೋಷಣೆ

ಬೆಂಗಳೂರು,ಅಕ್ಟೋಬರ್,24,2024 (www.justkannada.in):  ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಧಿಕೃತವಾಗಿ ಘೋಷಿಸಿದರು.

ಇಂದು ಬಿಎಸ್ ವೈ ಅವರ ಧವಳಗಿರಿ ನಿವಾಸದಲ್ಲಿ ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ನಡೆಯಿತು. ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಜೊತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಚರ್ಚಿಸಿದರು. ಸಭೆಯಲ್ಲಿ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಸಾರಾ ಮಹೇಶ್ ಸೇರಿ ಇತರೆ ನಾಯಕರು ಉಪಸ್ಥಿತರಿದ್ದರು.

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಗೆದ್ದೇ ಗೆಲ್ಲುತ್ತಾರೆ. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ನಾವೆಲ್ಲಾ ಒಟ್ಟಾಗಿ ಶ್ರಮಿಸುತ್ತೇವೆ. ನಿಖಿಲ್ ಗೆ ಪ್ರಧಾನಿ ಮೋದಿ ಆಶೀರ್ವಾದವಿದೆ ನಿಖಿಲ್ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿಕೆ,  ಚನ್ನಪಟ್ಟಣ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಹೆಸರನ್ನು ಬಿಎಸ್ ವೈ ಘೋಷಿಸಿದ್ದಾರೆ. ನಿಖಿಲ್ ಸ್ಪರ್ಧೆಗೆ ಕಾರ್ಯಕರ್ತರ ಒತ್ತಡವಿದೆ. ಈ ಹಿನ್ನೆಲೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂದರು.

ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಅಶ್ವಥ್ ನಾರಾಯಣ್, ಮಾಜಿ ಸಚಿವ ಸಾ.ರಾ ಮಹೇಶ್ ಸೇರಿ ಮೈತ್ರಿ ನಾಯಕರು ಉಪಸ್ಥಿತರಿದ್ದರು.

Key words: Nikhil Kumaraswamy, Contest, Channapatna, BSY, Official Announcement