ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಎಂಬ ಸಿದ್ಧರಾಮಯ್ಯ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು.

ಮಂಡ್ಯ,ಅಕ್ಟೋಬರ್,27,2021(www.justkannada.in): ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣವಿದೆ. ಅವರ ಇಡೀ ಕುಟುಂಬವೇ ರಾಜಕಾರಣದಲ್ಲಿದೆ ಎಂದು ಟೀಕಿಸಿದ್ಧ ಮಾಜಿ ಸಿಎಂ ಸಿದ್ಧರಾಮಯ್ಯಗೆ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆ ದೊಡ್ಡರಸಿನಕೆರೆಯಲ್ಲಿ ಇಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ನಲ್ಲಿ ಕುಟುಂಬ ರಾಜಕಾರಣ ಅನ್ನುವುದಾದರೇ ಸಿದ್ಧರಾಮಣ್ಣನ ಮಗನೂ ಶಾಸಕರಾಗಿದ್ದಾರೆ.ಅವರ ಮಗನೂ ರಾಜಕಾರಣದಲ್ಲಿ ಇದ್ದಾರೆ ಅಲ್ಲವೇ..? ಅವರು ಮೂಲತಃ ಡಾಕ್ಟರ್ ಆದರೆ ರಾಜಕೀಯಕ್ಕೆ ಏಕೆ ಬಂದ್ರು..? ಅಂತಾ ಕೇಳಬಹುದಲ್ಲವೇ ಎಂದು ಟಾಂಗ್ ನೀಡಿದರು.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ಧ ಜಮೀರ್ ಅಹ್ಮದ್ ಗೆ ಕುಟುಕಿದ ನಿಖಿಲ್ ಕುಮಾರಸ್ವಾಮಿ, ಯಾರನ್ನೋ ಮೆಚ್ಚಿಸಲು ಆ ರೀತಿ ಹೇಳಿಕೆ ನೀಡುತ್ತಿದ್ದಾರೆ. ಜನರಿಗೆ ತಪ್ಪು ಸಂದೇಶ ರವಾನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ಪಾಠ ಕಲಿಸುತ್ತಾರೆ ಎಂದರು.

Key words: Nikhil Kumaraswamy –former CM-Siddaramaiah’s –statement- family politics -JDS