ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ-ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಮಂಡ್ಯ,ಆಗಸ್ಟ್,28,2023(www.justkannada.in): ಮುಂದಿನ‌ 5 ವರ್ಷ ನಿಖಿಲ್ ​​ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ. ಯಾವುದೇ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ತಿಳಿಸಿದರು.

ಮಂಡ್ಯದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ. ಹೀಗಾಗಿ ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್​ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್​​ ಸ್ಪರ್ಧಿಸಿದ್ದನು. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ ಎಂದರು.

Key words: Nikhil – not- contest- any election – next five years-HD Kumaraswamy.