Tuesday, September 22, 2026

BDA Apartments

ನಿಖಿಲ್ 25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ BDA ...
Home Front Page ನಿಖಿಲ್ 25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ನಿಖಿಲ್ 25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಚನ್ನಪಟ್ಟಣ,ನವೆಂಬರ್,11,2024 (www.justkannada.in): ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ  25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ,   ಸಿಎಂ ಸಿದ್ದರಾಮಯ್ಯ ಸರ್ಕಾರ ದಿವಾಳಿಯಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ.  ಹಾಲಿನ ಸಬ್ಸಿಡಿ ಕಿಸಾನ್ ಸಮ್ಮಾನ್ ಯೋಜನೆ ಭಾಗ್ಯಲಕ್ಷ್ಮಿ ಹಣವನ್ನೂ ಬಿಟ್ಟಿಲ್ಲ. ಎಲ್ಲರೂ ಈ ಕ್ಷೇತ್ರದ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.  ನಿಖಿಲ್ 25 ಸಾವಿರ ಮತಗಳ  ಅಂತರದಿಂದ ಗೆಲ್ಲುತ್ತಾರೆ ಎಂದರು.

ಅಧಿಕಾರದ ಮದದಲ್ಲಿರುವ ಸಿಎಂ ಸಿದ್ದರಾಮಯ್ಯಗೆ ಪಾಠ ಕಲಿಸಬೇಕು. ಸರ್ಕಾರಕ್ಕೆ ಪಾಠ ಕಲಿಸಬೇಕು. ಹೀಗಾಗಿ ನಿಖಿಲ್ ಗೆ ಅವಕಾಶ ಕೊಡಿ ಎಂದು ಮಾಜಿ ಸಿಎಂ ಬಿಎಸ್ ವೈ ಮನವಿ ಮಾಡಿದರು.

Key words: Nikhil, win, 25,000 votes , former CM,  BSY