ಅಕ್ಟೋಬರ್ 8ಕ್ಕೆ ಅಣ್ಣವ್ರ ಮೊಮ್ಮಗಳು ಧನ್ಯಾ ಸಿನಿಮಾ ಬಿಡುಗಡೆ

ಬೆಂಗಳೂರು, ಸೆಪ್ಟೆಂಬರ್ 25, 2021 (www.justkannda.in): ಡಾ.ರಾಜ್​ಕುಮಾರ್​ ಅವರ ಮೊಮ್ಮಗಳು ಧನ್ಯಾ ರಾಮ್​ಕುಮಾರ್ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರಕ್ಕೆ ‘ನಿನ್ನ ಸನಿಹಕೆ’ ಬಿಡುಗಡೆ ದಿನಾಂಕ ಮತ್ತೆ ನಿಗದಿಯಾಗಿದೆ.

ಅಂದಹಾಗೆ ಅಂದುಕೊಂಡಂತೆ ಆಗಿದ್ದರೆ ಈ ಹೊತ್ತಿಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ ಕೊರೊನಾ, ಲಾಕ್ ಡೌನ್ ಕಾರಣಗಳಿಂದ ಚಿತ್ರ ಬಿಡುಗಡೆ ತಡವಾಗಿತ್ತು.

ಮಂದಿರಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಆಸನ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲೇ ನಿನ್ನ ಸನಿಹಕೆ ಸಿನಿಮಾದ ರಿಲೀಸ್​ ದಿನಾಂಕ ಪ್ರಕಟಿಸಿದೆ. ಮುಂದಿನ ತಿಂಗಳು ಅಕ್ಟೋಬರ್ 8ಕ್ಕೆ ಈ ಸಿನಿಮಾ ಬಿಡುಗಡೆಯಾಗಲಿದೆ.

ಆಗಸ್ಟ್​ 20ರಂದು ಅಂದರೆ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಬೇಕಿದ್ದನಿನ್ನ ಸನಿಹಕೆ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ಚಿತ್ರದ ಹೊಸ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ.

key words: ninna sanihake movie will release on october 8