ನಿಫಾ ವೈರಸ್ ಆತಂಕ: ಕೇರಳದ ಕೊಯಿಕ್ಕೋಡ್ ಜಿಲ್ಲೆಯಲ್ಲಿ ಶಾಲೆಗಳು ಬಂದ್, ಆನ್ ಲೈನ್ ಕ್ಲಾಸ್ ನಡೆಸಲು ಸೂಚನೆ

ಬೆಂಗಳೂರು, ಸೆಪ್ಟೆಂಬರ್ 17, 2023 (www.justkannada.in): ಕೇರಳದ ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ಕಂಡು ಬಂದಿರುವ ನಿಫಾ ವೈರಸ್ ಆತಂಕ ಮೂಡಿಸಿದ್ದು, ಸರಕಾರ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ನಿಫಾ ವೈರಸ್ ಭೀತಿ ಹಿನ್ನಲೆಯಲ್ಲಿ ಕೊಯಿಕ್ಕೋಡ್‌ ಜಿಲ್ಲಾಡಳಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಆನ್ ಲೈನ್ ತರಗತಿ ನಡೆಸಲು ಸೂಚನೆ ನೀಡಿದೆ. ಸೆಪ್ಟೆಂಬರ್ 18 ರಿಂದ ಮುಂದಿನ ಆದೇಶದ ತನಕ ಎಲ್ಲಾ ತರಗತಿಗಳನ್ನು ಆನ್‌ಲೈನ್ ಮೂಲಕ ನಡೆಸಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಮೊದಲು ಕೊಯಿಕ್ಕೋಡ್‌ ಜಿಲ್ಲಾಡಳಿತ ನಿಫಾ ವೈರಸ್ ಭೀತಿ ಇಂದ ಸೆಪ್ಟೆಂಬರ್ 24ರ ತನಕ ರಜೆ ಘೋಷಣೆ ಮಾಡಿತ್ತು. ಈಗ ಟ್ಯೂಷನ್ ಸೆಂಟರ್, ಕೋಚಿಂಗ್ ಕ್ಲಾಸ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಸೆಪ್ಟೆಂಬರ್ 18ರಿಂದ ಆನ್‌ಲೈನ್ ತರಗತಿ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ನಿಗದಿಯಾಗಿರುವ ಪರೀಕ್ಷೆಗಳನ್ನು ಮುಂದೂಡುವ ಕುರಿತು ಸರ್ಕಾರದ ಜೊತೆ ಮಾತುಕತೆ ನಡೆಸಿ ಶೀಘ್ರವೇ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ.