Saturday, August 8, 2026

BDA Apartments

Home Crime ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…

ನವದೆಹಲಿ,ಜ,14,2020(www.justkannada.in): ದೆಹಲಿಯಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಿಬ್ಬರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ  ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಾದ ಮುಕೇಶ್‍ಸಿಂಗ್ (32), ಪವನ್‍ಗುಪ್ತ (25), ವಿನಯ್‍ಕುಮಾರ್ ಶಮಾ (26) ಹಾಗೂ ಅಕ್ಷಯ್‍ಕುಮಾರ್ ಸಿಂಗ್ (31) ರನ್ನು ಜ.22ರಂದು ಬೆಳಗ್ಗೆ 7 ಗಂಟೆಗೆ ನೇಣಿಗೇರಿಸುವಂತೆ ದೆಹಲಿಯ ಪಟಿಯಾಲ ಕೋರ್ಟ್ ಈಗಾಗಲೇ ಆದೇಶ ಹೊರಡಿಸಿದೆ. ಅಪರಾಧಿಗಳಿಗೆ ಡೆತ್‍ವಾರೆಂಟ್ ಹೊರಡಿಸಿದೆ,

ಈ ನಡುವೆ ಇಬ್ಬರು ಅಪರಾಧಿಗಳಾದ  ಮುಖೇಶ್ ಮತ್ತು ವಿನಯ್  ಸುಪ್ರೀಂಕೋರ್ಟ್ ಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿಯನ್ನ ವಜಾಗೊಳಿಸಿದೆ.  ನಾಲ್ವರು ಅಪರಾಧಿಗಳಿಗೆ ಜನವರಿ 22 ರಂದು ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.

Key words: Nirbhaya -gang rape -murder case-Supreme Court -dismissed -curative application